ಪೋಲಿಸ್ ಇಲಾಖೆಯಲ್ಲಿ ನೇಮಕಾತಿ | KSP NEW NOTIFICATION 2021 - 2022

Heading : ಪೊಲೀಸ್ ಇಲಾಖೆಯಲ್ಲಿ ನೇಮಕಾತಿ | KSP NEW NOTIFICATION 2021 - 2022








👉 ಪೊಲೀಸ್ ಇಲಾಖೆಯಲ್ಲಿ ನೇಮಕಾತಿ

( 𝙽𝙴𝚆 𝙽𝙾𝚃𝙸𝙵𝙸𝙲𝙰𝚃𝙸𝙾𝙽 )

ನ್ಯಾಯ ವಿಜ್ಞಾನ ಪ್ರಯೋಗಾಲಯ ಮತ್ತು ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯ ಘಟಕಗಳಲ್ಲಿ ಖಾಲಿ ಇರುವ ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ ( ಸೀನ್ ಆಫ್ ಕ್ರೈಂ ಆಫಿಸರ್ )( 𝚂𝙾𝙲𝙾 ) ( ಸ್ಥಳೀಯ ಮತ್ತು ಮಿಕ್ಕುಳಿದ ವೃಂದದ ) ಹುದ್ದೆಗಳ ನೇಮಕಾತಿ ಕುರಿತು


Please be in touch with us On Our Telegram Channel


Fee ಶುಲ್ಕ

i.ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ |Rs.500/


 ii ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ Rs. 250/


ಎ) ನಿಗದಿತ ಶುಲ್ಕವನ್ನು ನಗದು/ಆನ್‌ಲೈನ್ ರೂಪದಲ್ಲಿ ಸ್ಥಳೀಯ ಅಂಚೆ ಕಛೇರಿಗಳಲ್ಲಿ ಅಥವಾ ಹೆಚ್.ಡಿ.ಎಫ್.ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಿ ನಂತರ ಚಲನ್‌ನ 'ಅಭ್ಯರ್ಥಿ ಪ್ರತಿ'ಯನ್ನು ಇಟ್ಟುಕೊಂಡಿರತಕ್ಕದು.


ಬಿ) ಇಲಾಖೆಯ ಅಧಿಕೃತ ವೆಬ್‌ಸೈಟ್ https://recruitment.ksp.gov.in ನಲ್ಲಿ ನೀಡಲಾಗಿರುವ ಸೂಚನೆಗಳನ್ನು ಓದಿಕೊಂಡು ಯಾವುದೇ ತಪ್ಪು ಮಾಹಿತಿ ನೀಡದೆ ಆನ್-ಲೈನ್‌ನಲ್ಲಿ ಲಭ್ಯವಿರುವ ಅರ್ಜಿಯನ್ನು ಭರ್ತಿ ಮಾಡತಕ್ಕದ್ದು.


ಟಿಪ್ಪಣಿ: ಒಮ್ಮೆ ಶುಲ್ಕವನ್ನು ಪಾವತಿಸಿದ ನಂತರ ಅದನ್ನು ಯಾವುದೇ ಸಂದರ್ಭದಲ್ಲಿಯೂ ಹಿಂದಿರುಗಿಸಲಾಗುವುದಿಲ್ಲ. ಅಥವಾ ಅದನ್ನು ನೇಮಕಾತಿ ಸಮಿತಿಯು ನಡೆಸುವ ಇತರೆ ಯಾವುದೇ ಪರೀಕ್ಷೆ ಅಥವಾ ನೇಮಕಾತಿಗಳಿಗೆ ಹೊಂದಿಸಿಕೊಳ್ಳಲಾಗುವುದಿಲ್ಲ. ಮೇಲಿನ ಕಾಲಂಗಳಲ್ಲಿ ನಮೂದಿಸಿದಂತೆ ಅಭ್ಯರ್ಥಿಗೆ ಅನ್ವಯಿಸುವ ಪರೀಕ್ಷಾ ಶುಲ್ಕವನ್ನು ಆನ್‌ಲೈನ್ / ನಗದು ರೂಪದಲ್ಲಿ ಚಲನ್ ನೊಂದಿಗೆ ಮಾತ್ರ ಮೇಲೆ ನಮೂದಿಸಿರುವ ಬ್ಯಾಂಕ್‌ಗಳಲ್ಲಿ ಮತ್ತು ಅಂಚೆ ಕಛೇರಿಗಳಲ್ಲಿ ಪಾವತಿಸತಕ್ಕದ್ದು, ಡಿಡಿ, ಪೋಸ್ಟಲ್ ಆರ್ಡರ್, ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ.


ಪ್ರಮುಖ ದಿನಾಂಕಗಳ ಮಾಹಿತಿ:


ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 17.12.2021 ರ ಬೆಳಿಗ್ಗೆ 10.00 ಗಂಟೆಗೆ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15.01.2022 ರ ಸಂಜೆ 06.00 ಗಂಟೆಗೆ


ಶುಲ್ಕವನ್ನು ಅಧಿಕೃತ ಬ್ಯಾಂಕ್ ಅಥವಾ ಅಂಚೆ ಕಛೇರಿಗಳ ವೇಳೆಯಲ್ಲಿ ಪಾವತಿಸಲು ಕೊನೆಯ ದಿನಾಂಕ : 18.01.2022. 


ಹುದ್ದೆಯ ಹೆಸರು


ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ (ಸೀನ್‌ ಆಫ್ ಕ್ರೈಂ ಆಫೀಸರ್‌) (SOCO)


Total - 206

ಸ್ಥಳೀಯ ವೃಂದದ ಖಾಲಿ ಹುದ್ದೆಗಳ ಸಂಖ್ಯೆ - 28

ಮಿಕ್ಕುಳಿದ ವೃಂದದ ಖಾಲಿ ಹುದ್ದೆಗಳ ಸಂಖ್ಯೆ - 178



ವಯೋಮಿತಿ:


ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 15.01.2022ಕ್ಕೆ ಎಲ್ಲಾ ಅಭ್ಯರ್ಥಿಗಳಿಗೆ ಅಂದರೆ ಪುರುಷ/ಮಹಿಳಾ/ತೃತೀಯ ಲಿಂಗದವರಿಗೆ ಕನಿಷ್ಟ 21 ವರ್ಷ ವಯಸ್ಸಾಗಿರಬೇಕು ಹಾಗೂ


ಈ ಕೆಳಕಂಡ ಗರಿಷ್ಠ ವಯೋಮಿತಿ ಮೀರಿರಬಾರದು.

ಸಾಮಾನ್ಯ ವರ್ಗ35 ವರ್ಷ

2ಎ 2ಬಿ 3ಎ 3ಬಿ - 38 ವರ್ಷ

ಪ.ಜಾ/ಪ.ಪಂ/ಪ್ರ-140 ವರ್ಷ


ವಿದ್ಯಾರ್ಹತೆ:


ಕಾನೂನಿನ ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾನಿಲಯದಿಂದ ವಿಧಿ ವಿಜ್ಞಾನ ವಿಷಯದಲ್ಲಿ ಕನಿಷ್ಠ ಶೇಕಡ 55 ರಷ್ಟು ಅಂಕಗಳೊಂದಿಗೆ ಪದವಿಯನ್ನು ಹೊಂದಿರತಕ್ಕದ್ದು.

ಅಥವಾ

ಕಾನೂನಿನ ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾನಿಲಯದಿಂದ ವಿಜ್ಞಾನ ವಿಷಯದಲ್ಲಿ ಕನಿಷ್ಠ ಶೇಕಡ 55 ರಷ್ಟು ಅಂಕಗಳೊಂದಿಗೆ ಪದವಿಯನ್ನು ಹೊಂದಿರತಕ್ಕದ್ದು ಹಾಗೂ ಜೊತೆಗೆ ಮಾನ್ಯತೆ ಪಡೆದ ಸಂಸ್ಥೆಯಿಂದ ವಿಧಿ ವಿಜ್ಞಾನ ವಿಷಯದಲ್ಲಿ ಕನಿಷ್ಟ ಶೇಕಡ 55 ರಷ್ಟು ಅಂಕಗಳೊಂದಿಗೆ 01 ವರ್ಷ ಡಿಪ್ಲೊಮಾವನ್ನು ಹೊಂದಿರತಕ್ಕದ್ದು.

ಅಥವಾ

ಕಾನೂನಿನ ರೀತ್ಯಾ ಸ್ಥಾಪತವಾದ ವಿಶ್ವವಿದ್ಯಾನಿಲಯದಿಂದ ವಿಜ್ಞಾನ ವಿಷಯದಲ್ಲಿ ಕನಿಷ್ಠ ಶೇಕಡ 55 ರಷ್ಟು ಅಂಕಗಳೊಂದಿಗೆ ಪದವಿಯನ್ನು ಹೊಂದಿರತಕ್ಕದ್ದು ಜೊತೆಗೆ ವಿಧಿ ವಿಜ್ಞಾನ ವಿಷಯದಲ್ಲಿ ಶೇಕಡ 55 ರಷ್ಟು ಅಂಕಗಳೊಂದಿಗೆ ಸ್ನಾತಕೋತ್ತರ ಪದವಿಯನ್ನು ಹೊಂದಿರತಕ್ಕದ್ದು.


ಲಿಖಿತ ಪರೀಕ್ಷೆ: 

ಅರ್ಹ ಅಭ್ಯರ್ಥಿಗಳಿಗೆ 150 ಅಂಕಗಳಿಗೆ ವಸ್ತುನಿಷ್ಠ ಮಾದರಿಯ ಪತ್ರಿಕೆಗಳನ್ನೊಳಗೊಂಡ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯನ್ನು ನಡೆಸಲಾಗುವುದು. ಎರಡು


ಎ) ಪತ್ರಿಕೆ-1: ಸಾಮಾನ್ಯ ಪತ್ರಿಕೆ- ಸಾಮಾನ್ಯ ಅಧ್ಯಯನ ಹಾಗೂ ವಿಜ್ಞಾನಕ್ಕೆ ಸಂಬಂಧಿಸಿದ ಎಲ್ಲಾ ವಿಷಯಾಧಾರಿತ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ-75 ಅಂಕಗಳು [ಸಮಯ: 01 ಗಂಟೆ 30ನಿಮಿಷಗಳು]

ಬಿ) ಪತ್ರಿಕೆ-2: ನಿರ್ಧಿಷ್ಟ ಪತ್ರಿಕೆ- ವಿಷಯಾಧಾರಿತ ಪ್ರಶ್ನೆ ಪತ್ರಿಕೆಯಾಗಿದ್ದು, ವಿಧಿ ವಿಜ್ಞಾನ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ-75 ಅಂಕಗಳು [ಸಮಯ: 01 ಗಂಟೆ 30ನಿಮಿಷಗಳು)

ಸಿ) ಯಾವುದೇ ರೀತಿಯ ಋಣಾತ್ಮಕ ಅಂಕಗಳು ಇರುವುದಿಲ್ಲ.


ಪಠ್ಯಕ್ರಮ: 

ಹುದ್ದೆಗೆ ನಿಗದಿಪಡಿಸಲಾಗಿರುವ ವಿದ್ಯಾರ್ಹತೆಯನುಸಾರ ಪಠ್ಯಕ್ರಮವನ್ನು (Syllabus) ತಯಾರಿಸಿ, ಇಲಾಖೆಯ ಅಧಿಕೃತ ವೆಬ್ ಸೈಟ್ https://recruitment.ksp.gov.in ನಲ್ಲಿ ಪ್ರಕಟಿಸಲಾಗುವುದು.


ಖಾಯಂಪೂರ್ವ ಅವಧಿ ಮತ್ತು ವೇತನ ಶ್ರೇಣಿ :

ಎ) ಖಾಯಂಪೂರ್ವ ಅವಧಿ: ಎರಡು ವರ್ಷ

ಬಿ) ವೇತನ ಶ್ರೇಣಿ:  37900-950-39800-1100-46400-1250-53900-1450-65600-1650-70850


ಸಿ) ಪಿಂಚಣಿ ಸೌಲಭ್ಯ: ಸರ್ಕಾರದ ಆದೇಶ ಸಂಖ್ಯೆ: ಎಫ್‌ಡಿ (ಎಸ್‌ಪಿಎಲ್) 04 ಪಿಇಟಿ 2005, ದಿನಾಂಕ: 31.03.2006 ರಂತೆ, ನೂತನ ಅಂಶದಾಯಿ ಪಿಂಚಣಿ ಸೌಲಭ್ಯ ಅನ್ವಯವಾಗುವುದು.


II. ಜಾತಿ ಮೀಸಲಾತಿ ಪ್ರಮಾಣ ಪತ್ರಗಳು :


ಜಾತಿ ಮೀಸಲಾತಿ ಕೋರಬಯಸುವ ಅಭ್ಯರ್ಥಿಗಳು ಈ ಕೆಳಕಂಡ ನಮೂನೆಗಳಲ್ಲಿ ಪ್ರಮಾಣ ಪತ್ರವನ್ನು ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಪಡೆದಿಟ್ಟುಕೊಂಡಿರತಕ್ಕದ್ದು.


ಎ) ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಸಂಬಂಧಪಟ್ಟ ತಹಶಿಲ್ದಾರ್ ರವರಿಂದ ಪಡೆದ ನಮೂನೆ-ಡಿ ಪ್ರಮಾಣ ಪತ್ರ,


ಬಿ) ಪ್ರವರ್ಗ -1 ವರ್ಗದ ಅಭ್ಯರ್ಥಿಗಳಿಗೆ ಸಂಬಂಧಪಟ್ಟ ತಹಶೀಲ್ದಾರ್ ರವರಿಂದ ಪಡೆದ ನಮೂನೆ-ಇ ಪ್ರಮಾಣ ಪತ್ರ.


ಸಿ) ಪ್ರವರ್ಗ- 2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳಿಗೆ ಸಂಬಂಧಪಟ್ಟ ತಹಶೀಲ್ದಾರ್ ರವರಿಂದ ಪಡೆದ ನಮೂನೆ - ಎಫ್ ಪ್ರಮಾಣ ಪತ್ರ


ಸೂಚನೆ ನಮೂನೆ ಎಫ್ ಪ್ರಮಾಣ ಪತ್ರವು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ: 15,01.2022ಕ್ಕೆ ಐದು ವರ್ಷಕ್ಕಿಂತ ಹಳೆಯದಾಗಿರಬಾರದು.


Notification

📥📥👇👇


Official Website


Note  : This documents we are downloaded from the (WhatsApp and Telegram) internet .we are not responsible for only type of  copyright issue yes. If we have any complaint regarding this content. We are trying to remove this content shorty. Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason. 



Daily Quiz Telegram Group Minimum 1000 Question https://t.me/kpsc2019

Comments

Popular posts from this blog

ಪರಿಸರ ಹಾಗೂ ಸಾಮಾನ್ಯ ವಿಜ್ಞಾನ ನೋಟ್ಸ್ [PDF]

ಪ್ರಚಲಿತ ಘಟನೆಗಳು 2023